ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ ವಿಧಿವಶರಾಗಿದ್ದಾರೆ. ಅಂಬುಜಾ ತಮ್ಮ ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್‌ನ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಂಬುಜಾ ಅವರಿಗೆ 80 ವರ್ಷ ವಯಸ್ಸಾಗಿತ್ತು. ಮಕ್ಕಳಾದ ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಐದು ಮಂದಿ ಗಂಡು ಮಕ್ಕಳು ಮತ್ತು ಪತಿ ದ್ವಾರಕೀಶ್ ಅವರನ್ನು ಅಗಲಿದ್ದಾರೆ. ದ್ವಾರಕೀಶ್ ಅವರ ಪುತ್ರ ನಿರ್ಮಾಪಕ ಯೋಗಿ ದ್ವಾರಕೀಶ್ ಇಂದಿನ ಅಂತ್ಯಕ್ರಿಯೆಗಳನ್ನ ನಡೆಸಿಕೊಡಲಿದ್ದಾರೆ.
ಹೆಚ್ ಎಸ್ ಅರ್ ಲೇಔಟ್ ನ ಅಪಾರ್ಟ್ಮೆಂಟ್ನಲ್ಲಿ ಸದ್ಯ ಅಂಬುಜ ಪಾರ್ಥೀವ ಶರೀರ ಇಡಲಾಗಿದೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಇನ್ನೂ ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.