ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಈಗಾಗಲೇ ಸಿಎಂ ಕೂಡಾ ಸಭೆ ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ.
ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಕ್ಲೋಸ್ ಮಾಡೊಲ್ಲ ಎಂದು ಸ್ಪಷ್ಟ ಪಡಿಸಿದರು. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸರ್ಕಾರವೇ ಉಚಿತ ಲಸಿಕೆ ನೀಡುತ್ತಿದೆ. ಪರೀಕ್ಷೆಗಳು ನಡೆಯುತ್ತಿರುವುದರಿಂದ ಶಾಲೆಗಳಲ್ಲಿ ಲಸಿಕೆ ಕೊಡೊದು ಸದ್ಯಕ್ಕೆ ನಿಲ್ಲಿಸಲಾಗಿದೆ. ಪರೀಕ್ಷೆಗಳು ಮುಗಿದ ಬಳಿಕ ಶಾಲೆಗಳಲ್ಲಿ ಲಸಿಕೆ ಅಭಿಯಾನ ಮತ್ತೆ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ :- ಜೂನ್ ಅಂತ್ಯದಲ್ಲಿ ಕೊರೊನಾ 4 ನೇ ಅಲೆ ಬರಬಹುದು –ಡಾ.ಕೆ.ಸುಧಾಕರ್
ಶಾಲೆಯಲ್ಲಿ ಧರ್ಮದ ಬುಕ್ ಓದಿ ಅಂತ ಹೇಳುವ ಹಾಗಿಲ್ಲ
ಕ್ಲಾರೆನ್ಸ್ ಶಾಲೆ ಬೈಬಲ್ ಕಡ್ಡಾಯ ನಿಯಮವು ಸರ್ಕಾರದ ನಿಯಮಕ್ಕೆ ವಿರೋಧವಾಗಿದೆ. ಈ ಶಾಲೆ ತಪ್ಪು ಮಾಡಿದೆ. ಶಿಕ್ಷಣ ಇಲಾಖೆ ಮೂಲಕ ನೋಟಿಸ್ ನೀಡಲಾಗಿದೆ. ಡಿಡಿಪಿಐ, ಬಿಇಓ ಮೂಲಕ ನೋಟಿಸ್ ನೀಡಲಾಗಿದೆ. ಆ ಶಾಲೆ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ :- ವಿದ್ಯುತ್ ತಂತಿ ತಗುಲಿ ಯುವಕ ಸಾವು – ಬೆಸ್ಕಾಂ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ