ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ.
2 ವರ್ಷ ಕೊರೊನಾ ದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.
ಇದನ್ನೂ ಓದಿ : – ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ- ವಿದ್ಯುತ್ ತಂತಿ ಹರಿದು ಬಿದ್ದು ಎರಡು ಹಸುಗಳು ಸಾವು