ಬೆಂಗಳೂರು : ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ (65) ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಅವರು, ಹೃದಯ ಸಂಬಂಧಿ ಕಾಯಿಲೆ ಕಾರಣ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ
ಮಹದೇವ ಪ್ರಕಾಶ್ ಅವರು, 1975ರಲ್ಲಿ ಮಾಜಿ ಸಿಎಂ ವಿರೇಂದ್ರ ಪಾಟೀಲರು ಆರಂಭಿಸಿದ್ದ ಲೋಕವಾಣಿ ಎಂಬ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಆರಂಭಿಸಿದ್ದರು. ಬಳಿಕ ಈ ಭಾನುವಾರ ಎಂಬ ನಿಯತಕಾಲಿಕದ ಸಂಪಾದಕರಾಗಿ ಕಾರ್ಯನಿರ್ವಹಿಸಿದರು. ವಿಜಯ ಕರ್ನಾಟಕದಲ್ಲಿ ಹೊರಳು ನೋಟ ಎಂಬ ಅಂಕಣದ ಮೂಲಕ ಪ್ರಸ್ತುತ ರಾಜಕೀಯ ಘಟನೆಗಳನ್ನು ವಿಶ್ಲೇಷಣೆ ಮಾಡುತ್ತಿದ್ದರು.
ಇನ್ನೂ ಮಹದೇವ ಪ್ರಕಾಶ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪವನ್ನು ವ್ಯಕ್ತಪಡಿಸಿದ್ದು, ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲತ ತಿಳಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ಒಂದು ವರ್ಷ ಆಡಳಿತ ಕುರಿತು ದಣಿವರಿಯದ ಧೀಮಂತ ಎಂಬ ಹೊತ್ತಿಗೆ ಹೊರ ತಂದಿದ್ದರು.