ಕನ್ನಡದ ಖ್ಯಾತ ಹಿರಿಯ ಸಾಹಿತಿ ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಚೆನ್ನವೀರ ಕಣವಿ ನಿಧನರಾಗಿದ್ದು, ಅವರಿಗೆ 93 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಬುಧವಾರ ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕವಿ ನಾಡೋಜ ಡಾ.ಚನ್ನವೀರ ಕಣವಿ (Poet Chennaveera Kanavi) ಕಳೆದೊಂದು ತಿಂಗಳಿನಿಂದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್‍ನಿಂದ ಸಂಪೂರ್ಣ ಗುಣಮುಖರಾಗಿದ್ದ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು.