SENSEX – ಷೇರುಮಾರುಕಟ್ಟೆ ಕುಸಿತ- ಹೂಡಿಕೆದಾರರಿಗೆ 5.47 ಲಕ್ಷ ಕೋಟಿ ರೂ. ನಷ್ಟ

ಹಣದುಬ್ಬರ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಭಾರತೀಯ ಷೇರುಮಾರುಕಟ್ಟೆ ಕುಸಿತದತ್ತ ಮುಖ ಮಾಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು ಹೂಡಿಕೆದಾರರಿಗೆ 5.47 ಲಕ್ಷ ಕೋಟಿ ರೂ ನಷ್ಟವಾಗಿದೆ. ಜಾಗತಿಕ ಷೇರುಮಾರುಕಟ್ಟೆಯಲ್ಲಿ ನೀರಸ ವಹಿವಾಟಿನ ಪರಿಣಾಮ ಬಾಂಬೆ ಷೇರುಪೇಟೆ(Bombay Stiock Exchange ) ನ ಸೆನ್ಸೆಕ್ಸ್ 1,500ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದೆ. ಇದರಿಂದಾಗಿ ಹೂಡಿಕೆದಾರರ 5.47 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ.


ಇಂದಿನ ವಹಿವಾಟಿನಲ್ಲಿ ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್ (Bajaj Finance), ಐಸಿಐಸಿಐ ಬ್ಯಾಂಕ್ (ICICI BANK), ಇಂಡಸ್ ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ (HDFC) ಷೇರುಗಳ ಮೌಲ್ಯ ಭಾರೀ ಕುಸಿತ ಕಂಡಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಬಂಡವಾಳ ಮಾರುಕಟ್ಟೆಯಲ್ಲಿ ನಿವ್ವಳ ಮಾರಾಟಗಾರರಾಗಿ ಉಳಿದಿದ್ದು, ವಿನಿಮಯ ಮಾಹಿತಿಯ ಪ್ರಕಾರ ಶುಕ್ರವಾರ ರೂ 3,973.95 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : –  ಡಾಲರ್ ಮುಂದೆ ಮತ್ತೆ ಕುಸಿತ ಕಂಡ ರೂಪಾಯಿ ಮೌಲ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!