ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ಪರಿಹಾರ ಮೊತ್ತ ಪಡೆಯಲು ರಾಜ್ಯ ಸರಕಾರ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಂದ ಅರ್ಜಿ ಆಹ್ವಾನಿಸಿದೆ.
ಪರಿಹಾರ ಧನ ಪಡೆಯಲು ಆನ್ ಲೈನ್ ಸೇವಾಸಿಂಧು ವೆಬ್ ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾಸಿಂಧು ವೆಬ್ ಪೋರ್ಟಲ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅನ್ಯ ಮಾರ್ಗದ ಮೂಲಕ ಆಟೋ ರಿಕ್ಷಾ,ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರು ಪರಿಹಾರ ಹಣ ಪಡೆಯುವಂತಿಲ್ಲ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಚಾಲಕರಿಗೆ ಪರಿಹಾರ ಹಣ ಖಾತೆಗೆ ನೇರವಾಗಿ ಹಸ್ತಾಂತರವಾಗಲಿದೆ.
ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ವರ್ಗಾವಣೆ ಮಾಡಲು ರಾಜ್ಯ ಸಾರಿಗೆ ಇಲಾಖೆ ಆಯುಕ್ತರಿಂದ ಆದೇಶ ಹೊರಬಿದ್ದಿದೆ.