ಐಷಾರಾಮಿ ಹಡಗಿನಲ್ಲಿ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ (Bolly wood ) ನಟ ಶಾರೂಖ್ ಖಾನ್ (SHAHRUKH KHAN )ಪುತ್ರ ಆರ್ಯನ್ ಖಾನ್ ಗೆ ( ARYAN KHAN ) ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಆರ್ಯನ್ ಗೆ ಕ್ಲೀನ್ ಚಿಟ್ ನೀಡಲಾಗಿದೆ.
ನಾಲ್ಕು ವಾರಗಳ ಕಾಲ ಮುಂಬೈ( Mumbai ) ಜೈಲಿನಲ್ಲಿ ಬಂಧಿತನಾಗಿದ್ದ ಆರ್ಯನ್ಗೆ ಮುಂಬೈ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿತ್ತು. ಬಳಿಕ ಆರ್ಯನ್ ಖಾನ್ ತನಿಖೆಗೂ ಸಹಕರಿಸುತ್ತಿದ್ದರು.ಸಮುದ್ರ ಮಧ್ಯೆ ಹಡಗಿನಲ್ಲಿ ನಟರು, ಉದ್ಯಮಿಗಳು ಮತ್ತು ಶ್ರೀಮಂತರ ಮಕ್ಕಳು ಸೇರಿ ಪಾರ್ಟಿ ಮಾಡುತ್ತಿದ್ದಾರೆ ಎಂದು ಎನ್ ಸಿಬಿಗೆ ಮಾಹಿತಿ ಸಿಕ್ಕಿತು. ಅದರ ಜಾಡು ಹಿಡಿದು ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಕಾರ್ಯಾಚರಣೆ ವೇಳೆ ಶಂಕಿತರನ್ನು ತೀವ್ರ ಶೋಧ ನಡೆಸಿದಾಗ ವಿವಿಧ ಬಟ್ಟೆಗಳಲ್ಲಿ, ಶೂ, ಒಳ ಉಡುಪುಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟಿದ್ದು ಬೆಳಕಿಗೆ ಬಂದು ವಶಪಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ : –3 ವಾರದ ನಂತರ ಜೈಲಿನಿಂದ ಹೊರಬಂದ ಆರ್ಯನ್ ಖಾನ್