ಕಾಂಗ್ರೆಸ್ ( CONGRESS ) ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ( SHAMANURU SHIVASHANAKARAPPA ) ಮತ್ತೊಂದು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.
91ನೇ ವರ್ಷದಲ್ಲಿರುವ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದು, ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ ಒಮ್ಮೆ ಸಂಸದರು ಹಾಗೂ ಐದು ಬಾರಿ ಶಾಸಕರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಈ ಮೊದಲು ದಾವಣಗೆರೆ ದಕ್ಷಿಣ ಕ್ಷೇತ್ರವೆಂದರೆ ಅದು ಶಾಮನೂರು ಶಿವಶಂಕರಪ್ಪ ಅವರಿಗೆ ಮೀಸಲು ಎಂದು ಹೇಳಲಾಗುತ್ತಿತ್ತು. ಕಾಂಗ್ರೆಸ್ ನ ಲ್ಲಿ ಅವರಿಗೆ ಯಾವುದೇ ಪ್ರತಿಸ್ಪರ್ಧಿಗಳು ಇರಲಿಲ್ಲ ಎನ್ನುವ ಪರಿಸ್ಥಿತಿ ಇತ್ತು. ಆದರೆ ಈ ವರ್ಷ ಮಾತ್ರ ಶಾಮನೂರು ಅವರಿಗೆ ಅವರದ್ದೇ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ. ಇದು ಹಿರಿಯ ನಾಯಕನಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಇದನ್ನೂ ಓದಿ : – ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿ ಬಂಧನ