ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಎಂದೇ ಹೇಳಲಾಗುತ್ತಿದ್ದ ಎನ್ ಸಿಪಿ ಮುಖಂಡ ಶರದ್ ಪವಾರ್ ತಾವು ರಾಷ್ಟ್ರಪತಿ ಚುನಾವಣಾ ರೇಸ್ ನಲ್ಲಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ರಾಷ್ಟ್ರಪತಿ ಸ್ಥಾನಕ್ಕೆ ಶರದ್ ಪವಾರ್ (Sharad Pawar) ಹೆಸರು ಕೇಳಿಬಂದಿತ್ತು. ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಸ್ಪರ್ಧೆಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎನ್ನಲಾಗಿತ್ತು. ಎಲ್ಲಾ ಪ್ರತಿಪಕ್ಷಗಳು ಪವಾರ್ ಗೆ ಬೆಂಬಲ ನೀಡಿದ್ದವು.
ಮುಂಬೈನಲ್ಲಿ ನಡೆದ ಎನ್‌ಸಿಪಿ ಸಭೆಯಲ್ಲಿ ಶರದ್ ಪವಾರ್ “ನಾನು ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ” ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಆದರೆ ಶರದ್ ಪವಾರ್ ತಮ್ಮ ಈ ನಿರ್ಣಯವನ್ನು ಮೈತ್ರಿ ಪಕ್ಷ ಕಾಂಗ್ರೆಸ್ ಗೆ ತಿಳಿಸಿಲ್ಲ ಎನ್ನಲಾಗಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆಯೂ ಕುತೂಹಲ ಕೆರಳಿಸಿದೆ. ಇದನ್ನೂ ಓದಿ : – 777 ಚಾರ್ಲಿ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಕೇರಳ ರಾಜ್ಯಪಾಲರು ಬಹುತೇಕ ರಾಷ್ಚ್ರಪತಿ ಹುದ್ದೆಯ ರೇಸ್ ನಲ್ಲಿದ್ದಾರೆ. ರಾಷ್ಟ್ರಪತಿ ಚುನಾವಣೆಗಾಗಿ ಜೂನ್ 15ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜುಲೈ 18ರಂದು ಚುನಾವಣೆಯ ನಡೆಯಲಿದ್ದು, ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24ರಂದು ಅಂತ್ಯಗೊಳ್ಳಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ : – ತಮಿಳುನಾಡಿನವರ ಬೇಡಿಕೆ ಕಾನೂನು ಬಾಹಿರ – ನಮ್ಮ ನೀರಿಗೆ ಹುನ್ನಾರ ನಡೆಸುತ್ತಿದ್ದಾರೆ – ಸಿಎಂ ಬೊಮ್ಮಾಯಿ