ಸ್ನಾಯು ಸೆಳೆತಕ್ಕೆ ಒಳಗಾಗಿರುವ ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಈಗಾಗಲೇ ಕೊರೊನಾ ಮತ್ತು ಗಾಯದ ಸಮಸ್ಯೆಗಳಿಂದ ಹಲವು ಪ್ರಮುಖ ಆಟಗಾರರ ಸೇವೆ ಕಳೆದುಕೊಂಡಿರುವ ಭಾರತ ತಂಡ ಇದೀಗ ಲಾರ್ಡ್ಸ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಅನುಪಸ್ಥಿತಿ ಎದುರಿಸಬೇಕಾಗಿದೆ.
ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ಮಧ್ಯಮ ವೇಗಿಯಾಗಿ ಕಣಕ್ಕಿಳಿದಿದ್ದ ಶಾರ್ದೂಲ್ ಎರಡೂ ಇನಿಂಗ್ಸ್ ಗಳಲ್ಲಿ ತಲಾ 2 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದ್ದರು. ಇದೀಗ ಶಾರ್ದೂಲ್ ಜಾಗಕ್ಕೆ ಮಧ್ಯಮ ವೇಗಿ ಅಥವಾ ಸ್ಪಿನ್ನರ್ ಆಡುತ್ತಾರಾ ಎಂಬುದು ಕಾದು ನೋಡಬೇಕಿದೆ.