ಸಲಾರ್ ನಲ್ಲಿ ಪ್ರಭಾಸ್ ಗೆ ಜೋಡಿಯಾದ ಶೃತಿ ಹಾಸನ್

ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಸಿಕ್ಕಾಪಟ್ಟ ಸಂಚಲನ ಮೂಡಿಸಿದೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಮತ್ತಷ್ಟು ನಿರೀಕ್ಷೆ ಮೂಡಿಸಿದೆ. ಹೀಗಾಗಿ ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುವಂತಾಗಿದೆ. ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಹೈದರಾಬಾದಿನಲ್ಲಿ ನಡೆದಿತ್ತು.
ಸಲಾರ್ ಸಿನಿಮಾ ಆರಂಭದಿಂದಲೂ ಪ್ರಭಾಸ್ ಗೆ ನಾಯಕಿ ಯಾರಾಗ್ತಾರೆ ಅನ್ನೋದೆ ಕುತೂಹಲ ಮೂಡಿಸಿತ್ತು. ಆ ಕುತೂಹಲಕ್ಕೆ ಇಂದು ತೆರೆ ಬಿದ್ದಿದ್ದು, ಚಿತ್ರತಂಡ ಅಧಿಕೃತವಾಗಿ ಬಹಿರಂಗಪಡಿಸಿದೆ.
ಬಾಲಿವುಡ್ ನಟಿ ಶೃತಿ ಹಾಸನ್ ಈ ಸಿನಿಮಾದ ನಾಯಕಿ. ಇಂದು ಶೃತಿಹಾಸನ್ ಗೆ ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಇಂದೇ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ. ಸಲಾರ್ ಗೆ ಸ್ವಾಗತ ಎಂದು ಬರೆದು, ಹುಟ್ಟುಹಬ್ಬದ ಶುಭಾಶಯ ಕೋರಿರುವ ಪೋಸ್ಟರ್ ಅನ್ನು ಹೊಂಬಾಳೆ ಟ್ವಿಟ್ಟರ್ ನಲ್ಲಿ ಬಿಟ್ಟಿದೆ. ಜೊತೆಗೆ ಪ್ರಶಾಂತ್ ನೀಲ್ ಕೂಡ ಆ ಪೋಸ್ಟ್ ಶೇರ್ ಮಾಡಿ ವಿಶ್ ಮಾಡಿದ್ದಾರೆ. ಪ್ರಭಾಸ್ ಕೂಡ ಶುಭಕೋರಿದ್ದಾರೆ.