ಹಿಜಾಬ್ ವಿಚಾರವಾಗಿ ಈಗಾಗಲೇ ಹೈ ಕೋರ್ಟ್ ನಿಂದ ತೀರ್ಪು ಬಂದಿದೆ. ಆದರೂ ಸಹ ಮುಸ್ಲಿಂ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್ ಕರೆ ನೀಡಿವೆ. ಈ ಕುರಿತು ಪ್ರತಿಕ್ರಿಯಿಸಿರೋ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಭಟನೆ ಮಾಡೋದು ಅವರ ಹಕ್ಕು ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ತೀರ್ಪಿನ ವಿರುದ್ಧ ಅವರಿಗೆ ಅಸಮಾಧಾನ ಆಗಿದೆ. ಹೀಗಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಸುಪ್ರೀಂಗೆ ಹೋಗಲು ಎಲ್ಲರಿಗೂ ಅವಕಾಶ ಇದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದ್ರು.