ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಕಾಂಗ್ರೆಸ್ ಪ್ರಜಾಧ್ವನಿ ಎಂಬ ಹೆಸರಿನ ಮೂಲಕ ಬಸ್ ಯಾತ್ರೆ ಮಾಡುತ್ತಿದ್ದು, ಪ್ರಚಾರದ ಭರಾಟೆಯಲ್ಲಿ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದೆ.
ಚಿಕ್ಕಮಗಳೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು, ಹಿಂದಿನ ನಮ್ಮ ಸರ್ಕಾರದ ಸಾಧನೆಗಳು ಮತ್ತು ಈಗಿನ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದೆ. pic.twitter.com/T7vMsY0pji
— Siddaramaiah (@siddaramaiah) January 21, 2023
ಇದರಂತೆ ಜೆಡಿಎಸ್ ಭದ್ರಕೋಟೆ, ದೊಡ್ಡಗೌಡರ ತವರು ಜಿಲ್ಲೆ ಹಾಸನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (SIDDARAMAIAH)ಕೊಟ್ಟಿಮಾತನಂತೆ ಸೌಲಭ್ಯಗಳನ್ನು ನೀಡದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಇದನ್ನು ಓದಿ :- ರಾಜ್ಯಕ್ಕೆ 100 ಬಾರಿ ಮೋದಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ – ಸಿದ್ದರಾಮಯ್ಯ
ಹಾಸನದಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು, ಜನರ ಆಶೋತ್ತರಗಳನ್ನು ಆಲಿಸಿದೆ.
ರಾಜ್ಯದ ಜನರಿಂದ ಕಾಂಗ್ರೆಸ್ ಪಕ್ಷದ ಪರವಾಗಿ ವ್ಯಕ್ತವಾಗುತ್ತಿರುವ ಒಲವನ್ನು ಗಮನಿಸಿದರೆ ಮುಂಬರುವ ಚುನಾವಣೆಯಲ್ಲಿ ನಾವು ಕನಿಷ್ಠ 130 ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಇದೆ. pic.twitter.com/JVHwFOSWt0— Siddaramaiah (@siddaramaiah) January 21, 2023
ಹಾಸನ(HASSAN) ದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಲೇಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತವಾಗಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ. ಕುಟುಂಬದ ಹಿರಿಯ ಮಹಿಳೆಗೆ ತಿಂಗಳಿಗೆ ₹ 2 ಸಾವಿರ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.
ಇದನ್ನು ಓದಿ :- ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಸರ್ಕಾರದಿಂದ ಗ್ರೀನ್ ಸಿಗ್ನಲ್