ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ – ಸಿಎಂ ಸ್ಪಷ್ಟೀಕರಣ ನೀಡಲಿ ಎಂದು ಆಗ್ರಹಿಸಿದ ಸಿದ್ದರಾಮಯ್ಯ 

ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿಯಬೇಕು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BASAVAJ BOMMAI ) ಆಗ್ರಹಿಸಿದ್ದಾರೆ.

BJP govt in K'taka has betrayed SC/STs: Siddaramaiah | Bengaluru -  Hindustan Times

ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿದ್ದರಾಮಯ್ಯ, ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

2023 Assembly poll will be my last: Siddaramaiah

ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ. ಇದನ್ನೂ ಓದಿ :- ಕಾಫಿ ನಾಡು ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

Siddaramaiah: I'm okay with a Dalit Karnataka chief minister, if MLAs  agree, says Cong leader

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸು ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ. ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡಹಿದ ಬಿಜೆಪಿ ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ ಎಂದಿದ್ದಾರೆ.

Former Karnataka CM Siddaramaiah Tests COVID-19 Positive, Admitted to  Hospital

ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆ ಮೊದಲಾದವರನ್ನು ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ. ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ. ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂದು ಸಿದ್ದರಾಮಯ್ಯ ( SIDDARAMAIAH ) ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ :- ರಾಜ್ಯ ಸರ್ಕಾರ ಮತಾಂತರ ಕಾಯ್ದೆ ತಂದಿರೋದನ್ನ ನಾನು ಸ್ವಾಗತಿಸುತ್ತೇನೆ – ಪ್ರಮೋದ್ ಮುತಾಲಿಕ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!