ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಬೇಕೆಂದರೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತಿದಿನ 50 ಸಾವಿರ ಆಸುಪಾಸಿನಲ್ಲಿದೆ. ಈ ಪ್ರಮಾಣ ಕಡಿಮೆಯಾಗಬೇಕು ಎಂದರೆ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಆಂಧ್ರಪ್ರದೇಶ, ದೆಹಲಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದ್ದರು. ಹೀಗಾಗಿ ಇದೀಗ ಅಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿಯೂ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂದರು.
ಇಂದಿನಿಂದ ಲಾಕ್ ಡೌನ್ ಜಾರಿಯಾಗಿರುವುದರಿಂದ ಬಡವರಿಗೆ ದಿನಸಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಫುಡ್ ಕಿಟ್ ವಿತರಣೆ ಮಾಡುತ್ತಿದ್ದೇವೆ. ಯಾರೂ ಕೂಡ ಹಸಿವಿನಿಂದ ಇರಬಾರದು ಎಂಬುದು ನಮ್ಮ ಉದ್ದೇಶ ಹಾಗಾಗಿ ಉಚಿತ ಫುಡ್ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು.