ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ರಕ್ಷಣೆ ಇದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿಲ್ಲ. ಎಸ್ಐಟಿ ಮುಖ್ಯಸ್ಥರನ್ನು ರಜೆ ಮೇಲೆ ಕಳುಹಿಸಿ ನಿಷ್ಕ್ರಿಯಗೊಳಿಸಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿ 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಸರ್ಕಾರ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಅವರ ವೈದ್ಯಕೀಯ ಪರೀಕ್ಷೆ ಇನ್ನು ಆಗಿಲ್ಲ. ಕೇವಲ ಬಿಸಿ, ಶುಗರ್ ಪರೀಕ್ಷೆ ಮಾತ್ರ ಮಾಡಿದ್ದಾರೆ. ಸರ್ಕಾರದ ರಕ್ಷಣೆ ಇರುವುದರಿಂದ ಮಾಜಿ ಸಚಿವ ಜಾರಕಿಹೊಳಿ ಅವರನ್ನು ಬಂಧಿಸುತ್ತಿಲ್ಲ ಎಂದರು.