ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯನವರು ಮಾರ್ಚ್ 15 ರಂದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು. ಇದಾದ ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು.
ಸಿದ್ದರಾಮಯ್ಯ ಅವರಿಗೂ ಕೋವಿಡ್ ಸೋಂಕು ಪಾಸಿಟಿವ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದಾದ ಬಳಿಕ ಸಾಕಷ್ಟು ಎಚ್ಚರಿಕೆಯನ್ನು ವಹಿಸಿಕೊಂಡಿದ್ದರು
ಈ ವೇಳೆ ಸಿದ್ದರಾಮಯ್ಯ ಜೊತೆ ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಉಪಸ್ಥಿತರಿದ್ದರು.