ಬೆಳಗಾವಿ: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಆಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಚುನಾವಣಾ ವಿಷಯವಾಗಿ ಬಳಸಿಕೊಳ್ಳಲ್ಲ. ಎಸ್ಐಟಿ ತನಿಖೆ ಮೇಲೆ ನಂಬಿಕೆ ಇಲ್ಲ. ಸಿಡಿ ಪ್ರಕರಣವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ಆಗಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸ್ಟ್ಯಾಂಡ್ ಇಲ್ಲ, ಅದು ಬಸ್‌ಸ್ಟ್ಯಾಂಡ್ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ವಿಚಾರ, ಪ್ರಹ್ಲಾದ್ ಜೋಶಿ ಒಬ್ಬ ಸೈಡ್ ಆ್ಯಕ್ಟರ್, ಡೈರೆಕ್ಟರ್ ಆರ್‌ಎಸ್‌ಎಸ್ ಬೆಲೆ ಏರಿಕೆ, ಕೇಂದ್ರ ಸರ್ಕಾರ ವೈಫಲ್ಯ, ರೈತ ವಿರೋಧಿ ಕಾನೂನು ತಂದಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಇಲ್ಲ, ಅಚ್ಛೆ ದಿನ್ ಇಲ್ಲ ನರಕ ಆಗಿಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಯಾವುದೇ ಜಾತಿಗೆ ಸೀಮಿತವಾದ ಪಾರ್ಟಿ ಅಲ್ಲ. ಎಲ್ಲಾ ಜಾತಿಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್. ಸತೀಶ್ ಜಾರಕಿಹೊಳಿ ಬಹಳ ಒಳ್ಳೆಯ, ಸಮರ್ಥ ಅಭ್ಯರ್ಥಿ ಎಂದರು.