ಕೊಪ್ಪಳ : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿದ್ದು ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದು ವಾಗ್ದಾಳಿ ನಡೆಸಿದರು.
ಕೊರೋನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ. ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು.