ಬೆಂಗಳೂರು : ರಾಜ್ಯ ಸರ್ಕಾರ ಕೊರೊನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ. ಸೋಂಕಿತರ ಪ್ರಮಾಣ ಇಳಿಮುಖವಾಗಿದೆಯೆಂದು ತೋರಿಸಲು ಸೋಂಕು ಪರೀಕ್ಷೆಯನ್ನೇ ಕಡಿಮೆ ಮಾಡಿದೆ ಎಂದು ಸರ್ಕಾರದ ವಿರುದ್ದ ವಿರೊಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ನಾಡಿನ ಜನತೆಗೆ ಎಸಗುತ್ತಿರುವ ದ್ರೋಹ. ಮುಖ್ಯಮಂತ್ರಿ ಇಂದಿನಿಂದಲೇ ಕೊರೊನಾ ಸೋಂಕು ಪರೀಕ್ಷೆಯನ್ನು ಹೆಚ್ಚಿಸಬೇಕು, ಮಕ್ಕಳಿಗೂ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಬೇಕು ಮತ್ತು ಕೊರೊನಾ ಮರಣಗಳನ್ನು ವಸ್ತುನಿಷ್ಠವಾಗಿ ದಾಖಲಿಸಿ, ಪ್ರತಿ ತಿಂಗಳು ಸಾವಿನ ಪ್ರಮಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದರು.
ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಬೆಳಗಾವಿ, ಮೈಸೂರು, ಹಾಸನ, ಉತ್ತರಕನ್ನಡ, ಬಳ್ಳಾರಿಯಲ್ಲಿ ಶೇ.50 ಕೊರೊನಾ ಪಾಸಿಟಿವ್ ಹೆಚ್ಚಿದೆ. ಬೇರೆ ಜಿಲ್ಲೆಗಳಲ್ಲೂ ಶೇ 35 ರ ಆಸುಪಾಸಿನಲ್ಲಿದೆ. ಹೀಗಿರುವಾಗ ಸೋಂಕು ಹೇಗೆ ಕಡಿಮೆಯಾಗುತ್ತಿದೆ. ಸರ್ಕಾರ ಎಲ್ಲದರಲ್ಲೂ ಸುಳ್ಳು ಹೇಳುತ್ತಲೇ ಬರುತ್ತಿದೆ, ಸುಳ್ಳು ಹೇಳುವುದನ್ನ ಬಿಟ್ಟು ಟೆಸ್ಟ್ ಪ್ರಮಾಣ ಹೆಚ್ಚಿಸಿ, ಸಾವಿನ ಸಂಖ್ಯೆಯನ್ನ ನಿಖರವಾಗಿ ತಿಳಿಸಿ ಎಂದು ಸರರ್ಕಾರವನ್ನು ಸಿದ್ದರಾಮಯ್ಯ ಆಗ್ರಹಿಸಿದರು.