ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ನರಕ ಎಂದರೆ ಏನೆಂಬುದನ್ನು ತೋರಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಪ್ರಧಾನಿ ವಿರುದ್ದ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಇಂದು ನೆಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆಯೂ ಏರುತ್ತೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೋದಿಯವರು ಪೆಟ್ರೋಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು ಎಂದು ಬಿಜೆಪಿ ವಿರುದ್ದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅಚ್ಚೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರು ಈಗ ಅವರೇ ತೈಲ ಬೆಲೆ ಏರಿಕೆ ಮಾಡಿ ಜನರ ರಕ್ತ ಹೀರುತ್ತಿದ್ದಾರೆ ಪೆಟ್ರೋಲ್, ಡಿಸೆಲ್ ದರ, ಅಗತ್ಯವಸ್ತುಗಳ ಬೆಲೆ ಏರಿಕೆಯನ್ನು ಇಳಿಕೆ ಮಾಡಬೇಕು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ದೇಶದ 140 ಕೋಟಿ ಜನರಿಗೆ ಬರೆಯನ್ನು ಎಳೆದಿದ್ದಾರೆ. ಕೇಂದ್ರ ಸರ್ಕಾರ ಆದಾಯ ಹೆಚ್ಚಿಸಲು ಎಲ್ಲಾ ಪದಾರ್ಥಗಳ ದರ ಏರಿಕೆ ಮಾಡಲಾಗಿದೆ ಎಂದರು.
ಪ್ರತಿಭಟನೆ ನಡೆಸುತ್ತಿದ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲು ಮುಂದಾದ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ರಾಜ್ಯದಲ್ಲಿ ಸೆಕ್ಷನ್ 144 ಜಾರಿ ಇದ್ದರೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿರುವ ಕೈ ನಾಯಕರನ್ನು ಮುಚ್ಚಳಿಕೆ ಹಾಗೂ ವೈಯಕ್ತಿಕ ಮಾಹಿತಿ ಪಡೆದು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.