ಬೆಂಗಳೂರು : ರಾಜ್ಯವನ್ನು ಹಸಿವು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಟೀಕಾ ಉತ್ಸವ್ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಒತ್ತಾಯಿಸಿದ್ದಾರೆ.
ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ರಾಜ್ಯವನ್ನು ಹಸಿವು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ಕಿವಿಮಾತು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿಯವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿಗಳನ್ನು ಕಂಡಾಗ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.