ಮೈಸೂರಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ಸಿದ್ದರಾಮೇಶ್ವರ ಮತ್ತು ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವ ಹಿನ್ನಲೆ ಸಿದ್ದರಾಮಯ್ಯ ತಮ್ಮ ಸ್ವಗ್ರಾಮಕ್ಕೆ ಆಗಮಿಸಿ ಜಾನಪದ ವಾದ್ಯಗಳ ಹಿಮ್ಮೆಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ್ದಾರೆ.
ಮೈಸೂರಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ಸಿದ್ದರಾಮೇಶ್ವರ ಮತ್ತು ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವ ಹಿನ್ನಲೆ ಸಿದ್ದರಾಮಯ್ಯ ತಮ್ಮ ಸ್ವಗ್ರಾಮಕ್ಕೆ ಆಗಮಿಸಿ ಜಾನಪದ ವಾದ್ಯಗಳ ಹಿಮ್ಮೆಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ್ದಾರೆ. ಸುಮಾರು 40 ನಿಮಿಷ ತಮ್ಮ ಸ್ನೇಹಿತರು ಹಾಗೂ ಬೆಂಬಲಿಗರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.
ಪೂಜೆಯ ನಂತರ ಮಾತನಾಡಿದ ಅವರು, ನಮ್ಮೂರಿನ ಜಾತ್ರೆಗೆ ನಾನು ಎಂದಿಗೂ ತಪ್ಪಿಸಿಕೊಂಡಿಲ್ಲ. ನಾನು ಮೂಲತಃ ಇದೇ ಊರಿನವನು. ಊರಿನೊಂದಿಗೆ ಮೊದಲಿನಿಂದಲೂ ನಿಕಟ ಸಂಪರ್ಕ ಇರಿಸಿಕೊಂಡಿದ್ದೇನೆ. ಜಾತ್ರೆಯಲ್ಲಿ ಪಾಲ್ಗೊಳ್ಲುವುದನ್ನು ಎಂದಿಗೂ ತಪ್ಪಿಸಿಕೊಳ್ಳುವುದಿಲ್ಲ. ಹಿಂದೆ ಸಚಿವನಾಗಿದ್ದಾಗಲೂ ಬಂದಿದ್ದೆ, ಮುಖ್ಯಮಂತ್ರಿಯಾಗಿದ್ದಾಗಲೂ ಬಂದಿದ್ದೆ, ಈಗಲೂ ಬಂದಿದ್ದೇನೆ. ಹಿಂದೆ ಎರಡು ವರ್ಷಗಳಿಗೊಮ್ಮೆ ಜಾತ್ರೆ ನಡೆಯುತ್ತಿತ್ತು. ಬಳಿಕ ಮೂರು ವರ್ಷಗಳಿಗೊಮ್ಮೆ ಆಯ್ತು. ಕೋವಿಡ್ ಬಂದಿದ್ದ ಕಾರಣ ಕಳೆದ ವರ್ಷ ಹಬ್ಬ ಮಾಡಿರಲಿಲ್ಲ. ಈ ವರ್ಷ ಮಾಡ್ತಿದ್ದೇವೆ. ಜಾತ್ರೆಗೆ ಬೇರೆ ಕಡೆಯಿಂದೆಲ್ಲಾ ನೆಂಟರಿಷ್ಟರು, ಗೆಳೆಯರು ಬಂದಿರುತ್ತಾರೆ. ಊರಿಗೆ ಬಂದು ಹೋಗೋದೇ ಖುಷಿ ಎಂದರು. ಅಪ್ಪನ ಕುಣಿತ ನೋಡಿ ಮಗ ಡಾ.ಯತೀಂದ್ರ ಖುಷಿಪಟ್ಟಿದ್ದಾರೆ.
ಇದನ್ನು ಓದಿ :- ರಾಜ್ಯದಲ್ಲಿ ಮಧ್ಯರಾತ್ರಿಯಿಂದಲೇ ಅಬ್ಬರಿಸಿದ ‘RRR’- ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ