ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಆಪ್ ಮುಖ್ಯಮಂತ್ರಿ ಭಗವಂತ್ ಮಾನ್ರನ್ನು ಹೊಗಳಿದ್ದಾರೆ. ಇಲ್ಲಿನ ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಆಪ್ ಪಕ್ಷವನ್ನು ಆಯ್ಕೆ ಮಾಡಿಕೊಂಡು, ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಜನರ ಇಚ್ಛೆಯೇ ದೇವರ ಇಚ್ಛೆ ಎಂದು ಹೇಳಿದ್ದರು. ಇದೀಗ ಭಗವಂತ್ ಮಾನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿದ್ದಾರೆ.
ಯಾರಿಂದಲೂ ಏನನ್ನೂ ನಿರೀಕ್ಷಿಸದ ವ್ಯಕ್ತಿ ಅತ್ಯಂತ ಸಂತೋಷವಾಗಿರುತ್ತಾನೆ. ಇದೀಗ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಪಂಜಾಬ್ನಲ್ಲಿ ಮಾಫಿಯಾ-ವಿರೋಧಿ ಯುಗದ ಅನಾವರಣ ಮಾಡುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಕೊಂಡಿದೆ. ಈ ನಿರೀಕ್ಷೆಗಳನ್ನು ಅವರು ಈಡೇರಿಸುತ್ತಾರೆ ಎಂಬ ನಂಬಿಕೆ ನನಗೆ ಇದೆ. ಜನಪರ ನೀತಿಗಳೊಂದಿಗೆ ಪಂಜಾಬ್ನ್ನು ಪುನರುಜ್ಜೀವನದ ಹಾದಿಗೆ ವಾಪಸ್ ತರುತ್ತಾರೆ ಎಂಬ ನಂಬಿಕೆಯಿದೆ ಎಂದು ಸಿಧು ಬರೆದುಕೊಂಡಿದ್ದಾರೆ. ನವಜೋತ್ ಸಿಂಗ್ ಸಿಧು ಈ ಟ್ವೀಟ್ ಕಾಂಗ್ರೆಸ್ಗೆ ಸ್ವಲ್ಪ ಮುಜುಗರ ತಂದಿದೆ. ಕಾಂಗ್ರೆಸ್ ಅವಧಿಯಲ್ಲಿ ಈ ಕೆಲಸ ಆಗಿಲ್ಲವಾ ಎಂಬ ಪ್ರಶ್ನೆ ಎಲ್ಲರಲ್ಲಿ ಕಾಡುತ್ತಿದೆ.