ಮನೆಗೆ ಬೆಂಕಿ ಬಿದ್ದು 6 ಮಕ್ಕಳು ಸಜೀವ ದಹನಗೊಂಡ ದಾರುಣ ಘಟನೆ ಬಿಹಾರದ ಅರೆರಿಯಾ ಜಿಲ್ಲೆಯಲ್ಲಿ ಸಂಭವಿಸಿದೆ.
ಕವೈಯ್ಯಾ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ದಾರುಣ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ, ಅತ್ಯಂತ ವೇಗವಾಗಿ ಬೆಂಕಿ ಮನೆಯನ್ನು ಆವರಿಸಿಕೊಂಡ ಪರಿಣಾಮ ಮಕ್ಕಳು ಸುಟ್ಟು ಕರಕಲಾಗಿದ್ದಾರೆ.
ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನು ಹೊರತೆಗೆದರು.
ಹಸುಗಳಿಗೆ ಮೇವು ಹಾಕಲು ಗುಡಿಸಲಿನಲ್ಲಿ ಸಂಗ್ರಹಿಸಲಾಗಿತ್ತು. ಇದರಿಂದ ಬೆಂಕಿ ಕ್ಷಿಪ್ರವಾಗಿ ಹರಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.