ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಮಹಿಳೆಯರಿದ್ದ ಪಿಕಪ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮಗು ಹಾಗೂ ಐವರು ಮಹಿಳೆಯರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಛತ್ತೀಸ್ ಗಢದ ರಾಯ್ ಗಢದಲ್ಲಿ ಸಂಭವಿಸಿದೆ.
ಸೋಮವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರೆಲ್ಲರೂ ಒಂದೇ ಕುಟುಂಬದ ಸದಸ್ಯರಾಗಿದ್ದಾರೆ.
ಪಿಕಪ್ ವಾಹನದಲ್ಲಿ 25ಕ್ಕೂ ಹೆಚ್ಚು ಜನರು ತುಂಬಿಕೊಂಡಿದ್ದು, ಧರ್ಮರಾಜಘಡ್ ಸಮೀಪದ ಸಿರ್ಸಂಗ ಗ್ರಾಮದ ಬಳಿ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.