ಪ್ರಸಕ್ತ ಸಾಲಿನ ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಮುಂದಿನ ತಿಂಗಳು ಮೈಸೂರಿನಲ್ಲಿ ನಡೆಯಲಿರುವ ದಸರಾಗೆ ಎಸ್.ಎಂ.ಕೃಷ್ಣ ಅವರನ್ನು ದಸಾರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇದನ್ನು ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.