ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೊನೆಗೂ ಬಾಯಿಬಿಟ್ಟಿದ್ದಾರೆ.
ಆರ್ ಎಸ್ಎಸ್ ಪ್ರಚಾರಕರಾಗಿ ಶಿಕಾರಿಪುರಕ್ಕೆ ಮಂಗಳವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಮಾಧ್ಯಮಗಳಲ್ಲಷ್ಟೆ ಚರ್ಚೆಯಾಗುತ್ತಿದೆ. ಈ ಬಗ್ಗೆ ತಮ್ಮ ನಡುವೆ ಚರ್ಚೆಯಾಗಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಪಕ್ಷದಲ್ಲಿ ಹುಣಿಸೆಹಣ್ಣು ಹಿಂಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲ ನೀಡುವುದಿಲ್ಲ ಎಂದು ಅವರು ತಿರುಗೇಟು ನೀಡಿದರು.
ಯಡಿಯೂರಪ್ಪ ಅವರು ತಮ್ಮ ಪುತ್ರರಿಗೆ ಸ್ಥಾನ ಭದ್ರಪಡಿಸಲು ಯತ್ನಿಸುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರು ಲಕ್ಷಾಂತರ ಕಾರ್ಯಕರ್ತರನ್ನು ಹುಟ್ಟುಹಾಕಿದ್ದಾರೆ. ಅವರು ತಮ್ಮ ಸ್ವಾರ್ಥಕ್ಕಾಗಿ ಯೋಚಿಸಿದವರಲ್ಲ. ವಿಜಯೇಂದ್ರ ಅವರನ್ನು ಸಚಿವರನ್ನಾಗಿ ಮಾಡುತ್ತಾರೆ, ರಾಘವೇಂದ್ರ ಅವರಿಗೆ ಯಾವುದೋ ಸ್ಥಾನ ಕೊಡಿಸುತ್ತಾರೆ ಅನ್ನುವುದೆಲ್ಲ ಸುಳ್ಳು ಎಂದು ಹೇಳಿದ್ದಾರೆ.