ಮಗ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿದ ತಾಯಿ ಆಸ್ಪತ್ರೆಯಿಂದ ಹೊರಗೆ ಬರುವಾಗ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪುತ್ರ ಮೋಹನ್ ಗೌಡ ಬೆಂಗಳೂರಿನ ವಿಜಯನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, ತಾಯಿ ಲೀಲಾವತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೋಹನ್ ಗೌಡ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮಗನ ಸಾವಿನ ಸುದ್ದಿ ಕೇಳಿ ತಾಯಿ ಆಸ್ಪತ್ರೆಯಿಂದ ಹೊರ ಬಂದಾಗ ಅಪಘಾತದಲ್ಲಿ ತಾಯಿ ಲೀಲಾವತಿ ಮೃತಪಟ್ಟಿದ್ದಾರೆ. ಯುವಕ ಆತ್ಮಹತ್ಯೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಲೀಲಾವತಿ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ವಿಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.