ಭಾರತೀಯ ಕ್ರಿಕೆಟ್ (Indian cricket) ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ (Sourav Ganguly) ರಾಜಿನಾಮೆ ನೀಡಿದ್ದಾರೆ ಎಂಬ ವದಂತಿ ಹಬ್ಬಿದೆ. ಇದಕ್ಕೆ ಬಿಸಿಸಿಐ (BCCI)ಕಾರ್ಯದರ್ಶಿ ಜಯ್ ಶಾ (Jai Shah) ಸ್ಪಷ್ಟನೆ ನೀಡಿದ್ದಾರೆ.
ಸೌರವ್ ಗಂಗೂಲಿ ಟ್ವೀಟ್ ಮಾಡಿ ಬಹಳಷ್ಟು ಜನರಿಗೆ ಸಹಾಯ ಮಾಡಲು ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿರುವುದಾಗಿ ಹೇಳಿದ್ದರು.ತಮ್ಮ ಜೀವನದ ಹೊಸ ಅಧ್ಯಾಯದ ಆರಂಭದ ಸುಳಿವು ನೀಡಿದ ಅವರು, ಟ್ವಿಟರ್ ಪೋಸ್ಟ್ನಲ್ಲಿ, ‘ಇಂದು, ನಾನು ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ, ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ನಾನು ಇದನ್ನು ನಮೂದಿಸುವಾಗ ನಿಮ್ಮ ಬೆಂಬಲವನ್ನು ನೀವು ಮುಂದುವರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನನ್ನ ಜೀವನದ ಅಧ್ಯಾಯ ಎಂದು ಹೇಳಿದ್ದಾರೆ.
ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ.ಕಳೆದ ತಿಂಗಳು ಗಂಗೂಲಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಂಗಾಳದ ತಮ್ಮ ಮನೆಯಲ್ಲಿ ಆತಿಥ್ಯ ನೀಡಿದ್ದರು. ಅಂದೇ ಕ್ರಿಕೆಟಿಗ ರಾಜಕೀಯಕ್ಕೆ ಬರಬಹುದು ಎಂಬ ಊಹಾಪೋಹಗಳು ಶುರುವಾಗಿತ್ತು. ಇದನ್ನೂ ಓದಿ : – ಮಠಾಧೀಶರ ಪತ್ರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು – ಸರ್ಕಾರಕ್ಕೆ ಶೆಟ್ಟರ್ ಸಲಹೆ