ಕೋವಿಡ್ ಅಬ್ಬರದ ನಡುವೆಯೂ ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದರು.
ಬುಧವಾರ ಪರೀಕ್ಷೆ ಆರಂಭದ ಕುರಿತು ಅಧಿಸೂಚನೆ ಹೊರಡಲಿದ್ದು, ಜುಲೈ 1ರಿಂದ ಚಂದನವಾಹಿನಿಯಲ್ಲಿ ಪಾಠಗಳು ನಡೆಯಲಿದೆ. ಯೂಟ್ಯೂಬ್ ನಲ್ಲಿ ಕೂಡ ವೀಡಿಯೊಗಳು ಲಭ್ಯವಾಗಲಿವೆ ಎಂದು ಅವರು ಹೇಳಿದರು.
ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಜೂನ್ 30ರಂದು ಹಾಲ್ ಟಿಕೆಟ್ ನೀಡಲಾಗುತ್ತದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್ ನೀಡಲಾಗುವುದು. ಅಗತ್ಯ ಬಿದ್ದರೆ ಶೀಲ್ಡ್ ಮಾಸ್ಕ್ ನೀಡಲಾಗುವುದು ಎಂದರು.