ಮಧ್ಯಪ್ರದೇಶ ( MADHYAPREADESH ) ದ ಇಂದೋರ್ ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ 5ನೇ ದಿನದ ಪಾದಯಾತ್ರೆಯ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಕೆಳಗೆ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತದಿಂದ ಕೆ.ಸಿ ವೇಣುಗೋಪಾಲ್ ಅವರ ಕೈ ಮತ್ತು ಮೊಣಕಾಲಿನ ಮೇಲೆ ಗಾಯಗಳಾಗಿದೆ.
Madhya Pradesh | Congress General Secretary KC Venugopal got his hands & knees injured after he fell down during Bharat Jodo Yatra in Indore pic.twitter.com/2qHja8uxZ4
— ANI (@ANI) November 27, 2022
ಅವರಿಗೆ ಭಾರತ್ ಜೋಡೋ ಯಾತ್ರೆಯ ಶಿಬಿರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆಯಲ್ಲಿ ಕಾಲ್ತುಳಿತದಿಂದ ಕೆಸಿ ವೇಣುಗೋಪಾಲ್ ಅವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ತೀವ್ರ ನೂಕುನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸ್ ಸಿಬ್ಬಂದಿ ವಿಫಲವಾಗಿದ್ದಾರೆ. ಆದರೆ, ಪ್ರಥಮ ಚಿಕಿತ್ಸೆ ಪಡೆದ ನಂತರ ಕೆಸಿ ವೇಣುಗೋಪಾಲ್ ( K.C VENUGOPALA ) ಮತ್ತೆ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ. ಇದಕ್ಕೂ ಮುನ್ನ ಇಂದೋರ್ ನಲ್ಲಿ ನಡೆದ ಮೆರವಣಿಗೆಯಲ್ಲಿ ಎಎನ್ಐ ಜೊತೆ ಮಾತನಾಡಿದ ಕೆ.ಸಿ ವೇಣುಗೋಪಾಲ್, ಭಾರತ್ ಜೋಡೋ ಯಾತ್ರೆಯ ವಿರುದ್ಧ ಏನಾದರೂ ಹುಳುಕು ಹುಡುಕಲು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ನಮ್ಮ ಈ ಯಾತ್ರೆಯ ನಿಜವಾದ ಫಲಿತಾಂಶ ಏನಾಗಲಿದೆ ಎಂದು ಅರಿವಿರುವುದರಿಂದ ಬಿಜೆಪಿಯವರು ಆತಂಕಕ್ಕೊಳಗಾಗಿದ್ದಾರೆ ಎಂದಿದ್ದಾರೆ. ಕನ್ಯಾಕುಮಾರಿಯಿಂದ ಆರಂಭವಾದ 150 ದಿನಗಳ ಪಾದಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರ ಇಮೇಜ್ಗೆ ಕಳಂಕ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಆದರೆ, ಈ ಯಾತ್ರೆಯ ಸಮಯದಲ್ಲಿ ಜನರು ರಾಹುಲ್ ಗಾಂಧಿಯವರ ನಿಜವಾದ ಮುಖವನ್ನು ನೋಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ : – ಮಂಗಳೂರು ಸ್ಫೋಟ ಪ್ರಕರಣ, ಸ್ಯಾಟ್ ಲೈಟ್ ಫೋನ್ ಬಳಕೆಯಾಗಿಲ್ಲ-ಎಸ್ ಪಿ ಸ್ಪಷ್ಟನೆ
“ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಪ್ರಸ್ತಾಪಿಸಿದ ವಿಷಯಗಳನ್ನು ಎಲ್ಲರೂ ಒಪ್ಪಿಕೊಳ್ಳುತ್ತಿದ್ದಾರೆ. ನಿರುದ್ಯೋಗ, ಹಣದುಬ್ಬರ, ದ್ವೇಷ, ಮತ್ತು ಜನರು ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಬಿಜೆಪಿ ಕಳೆದ ಕೆಲವು ವರ್ಷಗಳಿಂದ ರಾಹುಲ್ ಗಾಂಧಿ ( RAHUL GANDHI ) ಯವರ ವರ್ಚಸ್ಸನ್ನು ಹಾಳು ಮಾಡುವಲ್ಲಿ ನಿರತವಾಗಿದೆ. ಆದರೆ ಈಗ ಜನರು ರಾಹುಲ್ ಗಾಂಧಿಯವರ ನಿಜವಾದ ಮುಖವನ್ನು ನೋಡುತ್ತಿದ್ದಾರೆ. ವಿದ್ಯಾವಂತರು, ಸಹಾನುಭೂತಿಯುಳ್ಳವರಾದ ಜನರು ಸ್ವಂತ ನಿಲುವು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.
ಇದನ್ನೂ ಓದಿ : – ರಾಜಕೀಯಕ್ಕೆ ಎಂಟ್ರಿ ಕೊಡಲು ರೌಡಿಶೀಟರ್ ಸೈಲೆಂಟ್ ಸುನೀಲ ಪ್ಲಾನ್.!