ಮೈಸೂರು : ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ 5,500 ಮೆಟ್ರಿಕ್ ಟನ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಜಂಬು ಸಿಲಿಂಡರ್ ಗಳಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೂ ಚರ್ಚಿಸಿದ್ದು, ಈಗಾಗಲೇ ಆಕ್ಸಿಜನ್ ಉತ್ಪಾದಕರ ಜೊತೆ ಮಾತುಕತೆ ನಡೆದಿದೆ. 40,000 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜಾಗಿದೆ. 5,500 ಮೆಟ್ರಿಕ್ ಟನ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ರೆಮ್ ಡಿಸಿವಿರ್ ಬಗ್ಗೆ ತಪ್ಪು ಕಲ್ಪನೆಯಿದೆ. ಅದನ್ನು ಪಡೆದರೆ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತೇವೆ ಎಂದುಕೊಂಡಿದ್ದಾರೆ. ಆದರೆ ರೆಮ್ ಡಿಸಿವಿರ್ ಗಿಂತ ಸ್ಟೆರಾಯ್ಡ್ ಉತ್ತಮವಾಗಿ ಕೆಲಸ ಮಾಡುತ್ತದೆ. ಕೆಲ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ರೆಮ್ ಡಿಸಿವಿರ್ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.