ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಿ. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಸಿ ಆರಂಭಿಸಿ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪನವರು ಕೊರೊನಾ ಪ್ರಕರಣಗಳು ಹೆಚ್ಚಿರುವ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಪಿಡಿಒಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.
ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್ ಟೆಸ್ಟ್ ಹೆಚ್ಚಿಸಿ. ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣ ಮಾಡಿ. ಹಳ್ಳಿಗಳಿಗೆ ನಗರ ಪ್ರದೇಶದಿಂದ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿ. ನೆಗೆಟಿವ್ ವರದಿ ಬಂದರೇ ಮಾತ್ರ ಗ್ರಾಮಕ್ಕೆ ಪ್ರವೇಶ ನೀಡಿ. ಪಾಸಿಟಿವ್ ಬಂದರೇ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಿ ಎಂದು ತಿಳಿಸಿದರು.