ಮೈಸೂರು: ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರವಾಸಿ ತಾಣಗಳು, ರೆಸಾರ್ಟ್ಗಳು, ಪಾರ್ಟಿ ಹಾಲ್, ರಿಕ್ರಿಯೇಷನ್ ಕ್ಲಬ್ ಮತ್ತು ಚಿತ್ರಮಂದಿರಗಳ ಪ್ರವೇಶಕ್ಕೆ ಕಡ್ಡಾಯವಾಗಿ ಕೋವಿಡ್ 19 ನೆಗೆಟಿವ್ ವರದಿ ತರಲೇಬೇಕು.
ಏ.20ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಈ ಬಗ್ಗೆ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಬಗ್ಗೆ ಈ ಸಿಬ್ಬಂದಿ ಕಣ್ಣಿಟ್ಟಿರುತ್ತಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಪ್ರವಾಸಿಗರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ವರದಿಯನ್ನು ತೋರಿಸಿ ಪ್ರವಾಸಿ ಸ್ಥಳಗಳಿಗೆ ಪ್ರವೇಶ ಪಡೆಯಬೇಕು.
ಇಲ್ಲವಾದಲ್ಲಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಬೆಂಗಳೂರಿನಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವವರು 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ 19 ವರದಿ ಹೊಂದಿರುವುದು ಸೂಕ್ತ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.