ಪಂಜಾಬ್: ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾವೈರಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹೆಚ್ಚಾಗಿದೆ. ಅದರಲ್ಲೂ ಮುಖ್ಯವಾಗಿ ಮಹಾರಾಷ್ಟ್ರ ಮತ್ತು ಪಂಜಾಬ್‌ನಲ್ಲಿ ಕಳೆದ ಹದಿನೈದು ದಿನಗಳಿಂದ ಅತಿ ಹೆಚ್ಚು ಕರೋನಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಸರ್ಕಾರ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಪಂಜಾಬ್‌ನಲ್ಲಿ ಕಠಿಣ ನಿಯಮಗಳನ್ನು ಹೊರಡಿಸಲಾಗಿದೆ.
ಪಂಜಾಬ್‌ನಲ್ಲಿ ರಾತ್ರಿ ನಿಷೇಧಾಜ್ಞೆ ಸೇರಿದಂತೆ ವಿವಿಧ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಾದ್ಯಂತ ಜನರ ಸಂಚಾರ, ವ್ಯಾಪಾರ ವಹಿವಾಟಿನ ಮೇಲೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಿಗೆ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಂತ್ಯಸಂಸ್ಕಾರ, ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಜನರು ಗುಂಪುಗೂಡುವುದನ್ನು ನಿಯಂತ್ರಿಸಲು ಒಬ್ಬ ಪೊಲೀಸ್ ಸಿಬ್ಬಂದಿ ಹಾಜರಿರುವುದು ಕಡ್ಡಾಯವಾಗಿದೆ.
ಸರ್ಕಾರಿ ಕಚೇರಿಗಳು ಉದ್ಯೋಗಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಈ ಹೊಸ ನಿರ್ಬಂಧಗಳ ಜತೆಗೆ ಶಾಲೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚುವುದು ಸೇರಿದಂತೆ, ವಿವಿಧ ನಿಯಗಳು ಏಪ್ರಿಲ್ 30ರವರೆಗೂ ಮುಂದುವರಿಯಲಿವೆ.