ಬೆಂಗಳೂರು : ಕೊರೊನಾ ಲಸಿಕೆ ಮಾರಾಟದ ದಂಧೆಯಲ್ಲಿ ಯಾರಾದರೂ ತೊಡಗಿದರೇ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಧ್ಯೆ ಲಸಿಕೆ ದಂಧೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಲಸಿಕೆ ಮಾರಾಟ ದಂಧೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನ ಬಿಡುವುದಿಲ್ಲ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಆದರೆ ಪಟ್ಟಣಗಳಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆಯಾಗುತ್ತಿದೆ. ಹೀಗಾಗಿ ಬಿಗಿ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ. ಆದ್ದರಿಂದ ಯಾರೂ ಸಹ ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಸಚಿವರು ಸಲಹೆ ನೀಡಿದರು.