ಪಿಜಿಗಳಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳುವಂತೆ ಬಿಬಿಎಂಪಿ ಈಗಾಗಲೇ ಸೂಚನೆ ನೀಡಿದೆ. ಈ ಮೂಲಕ ಬೆಂಗಳೂರಿನಲ್ಲಿರುವ ಹಾಸ್ಟೆಲ್ ಮತ್ತು ಪಿಜಿ ಮಾಲೀಕರಿಗೆ ಪಾಲಿಕೆ ಶಾಕ್ ಕೊಟ್ಟಿದೆ.
ಕಾಲೇಜುಗಳು ರಜೆ ಇದ್ರೂ ಪಿಜಿಗಳಲ್ಲಿಯೇ ಅನಿವಾರ್ಯ ಕಾರಣದಿಂದ ವಿದ್ಯಾರ್ಥಿಗಳು ಇದ್ರೆ ಅವರೇ ಹೊಣೆಯಾಗಬೇಕಾಗುತ್ತದೆ.110 ಚದರಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ. ಪಿಜಿಯ ಸ್ವಚ್ಛತೆಯ ಹೊಣೆಯನ್ನ ಪಿಜಿ ಮಾಲೀಕರೇ ಹೊರಬೇಕು.
ಪಿಜಿ ವಾಸಿಗಳನ್ನ ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರ್ ಎಂದು ಹೊರಹಾಕುವಂತಿಲ್ಲ. ಪಿಜಿಗಳ ನಿರ್ಲಕ್ಷ್ಯದಿಂದ ಕೋವಿಡ್ ಹರಡುವಿಕೆ ಕಂಡಲ್ಲಿ ಕಠಿಣ ಕ್ರಮಕೈಗೊಳ್ಳಲಾಗುತ್ತೆ ಎಂದು ಪಾಲಿಕೆ ಖಡಕ್ ವಾರ್ನಿಂಗ್ ನೀಡಿದೆ