ಕರ್ನಾಟಕ ಇತಿಹಾಸದ ಭ್ರಷ್ಟಾತಿ ಭ್ರಷ್ಟ ಮಂತ್ರಿ ಇದ್ದರೆ ಅದು ಸುಧಾಕರ್, ಆತನಿಗೆ ರಾಜಕೀಯ ಜನ್ಮಕೊಟ್ಟಿದ್ದು ಕಾಂಗ್ರೆಸ್ , ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ನಾನು ಪರಿಪರಿಯಾಗಿ ಹೇಳಿದೆ. ಆದ್ರೆ ಬೆಳಗ್ಗೆನೇ ಬಾಂಬೆಗೆ ಹೋಗ್ಬಿಟ್ಟ ಎಂದ ಸಿದ್ದರಾಮಯ್ಯ (SIDDARAMAIAH) ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ (CONGRESS)ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ ಸುಧಾಕರ್ ಅವರಿಗೆ ರಾಜಕೀಯ ಜನ್ಮ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. 2013ರಲ್ಲಿ ಅಂಜನಪ್ಪ ಅವರಿಗೆ ಟಿಕೇಟ್ ನೀಡುವಂತೆ ವೀರಪ್ಪ ಮೊಯ್ಲಿ ಅವರು ಹೇಳಿದರು, ಆದರೆ ನಾನು ಮತ್ತು ಪರಮೇಶ್ವರ್ ಸುಧಾಕರ್ ಅವರಿಗೆ ಟಿಕೇಟ್ ನೀಡಿದ್ದರಿಂದ ಇಂದು ಪಶ್ಚಾತಾಪ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 2013ರಲ್ಲಿ, 2018ರಲ್ಲಿ ಸುಧಾಕರ್ ಶಾಸಕರಾಗಿ ನಮ್ಮ ಜೊತೆ ಇದ್ದರು. ನಂತರ ದುರಾಸೆಗೆ ಒಳಗಾಗಿ ಪಕ್ಷ ಬಿಟ್ಟು ಬಿಜೆಪಿ ಸೇರಿದರು ಎಂದು ಹೇಳಿದ್ರು. ಇದನ್ನು ಓದಿ :- ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ – ಡಿ.ಕೆ. ಶಿವಕುಮಾರ್
ಅಶ್ವತ್ಥ್ ನಾರಾಯಣ ಮತ್ತು ಸುಧಾಕರ್ ಅವರು ಪತ್ರಿಕಾಗೋಷ್ಠಿ ಮಾಡಿ ನಮ್ಮ ಸರ್ಕಾರದ ಸಚಿವರ ಮೇಲೆ ಆರೋಪ ಮಾಡಿದ್ದಾರೆ. ಜಾರ್ಜ್ ಅವರು ವೈಟ್ ಟಾಪಿಂಗ್ ನಲ್ಲಿ ದುಡ್ಡು ಮಾಡಿದ್ದಾರೆ, ಸಿದ್ದರಾಮಯ್ಯ ಅವರು ರೀಡೂ ಮಾಡಿದ್ದಾರೆ ಎನ್ನುತ್ತಾರೆ, ಈ ರೀಡೂ ಪದವನ್ನು ಉಪಯೋಗಿಸಿದ್ದು ಹೈಕೋರ್ಟ್. ಸಿದ್ದರಾಮಯ್ಯ ಅವರ ಕಾಲದ ಆಡಿಟ್ ರಿಪೋರ್ಟ್ ಬಂದಿದೆ. ಭ್ರಷ್ಟಾಚಾರ ನಡೆದಿದೆ ಎನ್ನುತ್ತಾರೆ. ಇದೊಂದು ರೀತಿ ಭೂತದ ಬಾಯಲ್ಲಿ ಭಗವದ್ಗೀತೆ ಹಾಗಿದೆ. ರಾಜ್ಯದಲ್ಲಿ ಅತೀ ಭ್ರಷ್ಟ ಸಚಿವರು ಇದ್ದರೆ ಅದು ಸುಧಾಕರ್ ಅವರು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದನ್ನು ಓದಿ :- Bharat Jodo- ಮಾಜಿ ಪ್ರಧಾನಿ ದೇವೇಗೌಡರಿಗೆ ಭಾರತ್ ಜೋಡೋ ಸಮಾರೋಪಕ್ಕೆ ಆಹ್ವಾನ