ಸ್ಯಾಂಡಲ್ ವುಡ್ ನಲ್ಲಿ ಡಾರ್ಲಿಂಗ್ ಕೃಷ್ಣ ಅಂತಾನೇ ಫೇಮಸ್ ಆಗಿರೋ ನಟ ಕೃಷ್ಣ ಅಲಿಯಾಸ್ ಸುನೀಲ್. ಲವ್ ಮಾಕ್ಟೈಲ್ ಸಿನಿಮಾದ ಸಕ್ಸಸ್ ನಂತರ ತಾವು ಪ್ರೀತಿಸಿದ ಹುಡುಗಿಯ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದಾದ ಬಳಿಕ ಲವ್ ಮಾಕ್ಟೈಲ್ ಪಾರ್ಟ್-2 ಸಿನಿಮಾವನ್ನ ಅನೌನ್ಸ್ ಮಾಡಿದ್ರು. ಇದಾದ ಬಳಿಕ ಶುಗರ್ ಫ್ಯಾಕ್ಟರಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ನಟ ಡಾರ್ಲಿಂಗ್ ಕೃಷ್ಣ.
ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮಾಂಟೆರೋ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸ್ತಿರುವ ಸಿನಿಮಾ ಇದಾಗಿದ್ದು, ಇದೀಗ ಪ್ರವಾಸಿಗರ ಸ್ವರ್ಗ ಅಂದ್ರೆ ಗೋವಾದಲ್ಲಿ ಬೀಡುಬಿಟ್ಟಿದೆ.
ಹೌದು, ಗೋವಾದ ಸುಂದರ ತಾಣಗಳಲ್ಲಿ ಸತತ 24 ದಿನಗಳ ಕಾಲ ಶೂಟಿಂಗ್ ಪ್ಲಾನ್ ಮಾಡಿರುವ ಚಿತ್ರತಂಡ ಸಾಂಗ್ಸ್ ಹಾಗೂ ಸಾಹಸ ದೃಶ್ಯಗಳನ್ನ ಚಿತ್ರೀಕರಣ ಮಾಡುತ್ತಿದೆ. ನಾಯಕ, ನಾಯಕಿಯ ಜೊತೆಗೆ ಅದ್ವಿತಿ ಶೆಟ್ಟಿ, ಶಿಲ್ಪ ಶೆಟ್ಟಿ, ರಂಗಾಯಣ ರಘು, ಲವ್ ಮ, ಮಾಕ್ಟೈಲ್ ಅಭಿ ಸೇರಿದಂತೆ ಮುಂತಾದವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್.ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರದಲ್ಲಿ ಏಳು ಹಾಡುಗಳಿದ್ದು, ಚೇತನ್ ಕುಮಾರ್, ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಅರಸು ಅಂತಾರೆ, ಚಂದನ್ ಶೆಟ್ಟಿ, ರಾಘವೇಂದ್ರ ಕಾಮತ್ ಬರೆಯುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ಧನಂಜಯ್ ಅವರ ನೃತ್ಯ ನಿರ್ದೇಶನ ಈ ಸಿನಿಮಾಗಿದೆ. ಸದ್ಯ ಚಿತ್ರದ ಮೇಕಿಂಗ್ ಸ್ಟಿಲ್ಸ್ ವೈರಲ್ಲಾಗಿದ್ದು, ಸಿನಿಮಾ ಮೇಲೆ ನಿರೀಕ್ಷೆಗಳನ್ನ ಹುಟ್ಟು ಹಾಕಿದೆ.