ಕರ್ನಾಟಕಕ್ಕೆ ಕೂಡಲೇ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಪೂರೈಕೆ ಮಾಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಕೇಂದ್ರ ಸರಕಾರ ಎತ್ತಿ ಹಿಡಿದಿದೆ. ಈ ಮೂಲಕ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಕೊರೊನಾ ಎರಡನೇ ಅಲೆಯಿಂದ ರಾಜ್ಯದಲ್ಲಿ ಜನರು ತತ್ತರಿಸುತ್ತಿದ್ದು, ಕೇಂದ್ರ ಸರಕಾರ ಅಗತ್ಯವಿರುವಷ್ಟು ಆಕ್ಸಿಜನ್ ಪೂರೈಸಿರಲಿಲ್ಲ. ಅಲ್ಲದೇ ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಬಳಕೆಗೂ ನಿರ್ಬಂಧ ವಿಧಿಸಿತ್ತು.
ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಕೊರೊನಾ ಸೋಂಕಿತರು ಮೃತಪಟ್ಟ ಹಿನ್ನೆಲೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡಿದ್ದ ಕರ್ನಾಟಕ ಹೈಕೋರ್ಟ್, 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಕೇಂದ್ರ ಸರಕಾರಕ್ಕೆ ಆದೇಶಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆಕ್ಸಿಜನ್ ಕೊರತೆಯಿಂದ ಕರ್ನಾಟಕವನ್ನು ಸಂಕಷ್ಟಕ್ಕೆ ದೂಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.
ಕರ್ನಾಟಕ ಹೈಕೊರ್ಟ್ ಆಕ್ಸಿಜನ್ ಪೂರೈಕೆ ಕುರಿತು ಸಮಗ್ರ ಮಾಹಿತಿ ಪಡೆದು ಸೂಕ್ತ ಆದೇಶ ನೀಡಿದೆ. ಆದ್ದರಿಂದ ಈ ವಿಷಯದಲ್ಲಿ ಕೇಂದ್ರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.