ಐಎಸ್ ಎಸ್ ಸಾಯಲಿ ಎಂದು ಪಾಕಿಸ್ತಾನ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ತಾಲಿಬಾನಿಗಳು ಗುಂಡು ಹಾರಿಸಿದ ಆಘಾತಕಾರಿ ಘಟನೆ ರಾಜಧಾನಿ ಕಾಬೂಲ್ ನಲ್ಲಿ ನಡೆದಿದೆ.
ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಳ್ಳಲು ಪರೋಕ್ಷವಾಗಿ ನೆರವಾದ ಐಎಸ್ ಐ ಗುಪ್ತಚರ ಸಂಸ್ಥೆ ವಿರುದ್ಧ ಘೋಷಣೆ ಕೂಗುತ್ತಾ ನೂರಾರು ಪ್ರತಿಭಟನಕಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ತಾಲಿಬಾನಿಗಳು ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಾಬೂಲ್ ಸೆರೆನಾ ಹೋಟೆಲ್ ಬಳಿ ಇರುವ ಪಾಕಿಸ್ತಾನದ ಐಎಸ್ ಐ ಕಚೇರಿ ಸಮೀಪ ಆಫ್ಘಾನಿಸ್ತಾನಿ ನಾಗರಿಕರು ಪ್ರತಿಭಟನೆ ನಡೆಸಿದ್ದು, ಪ್ರತಿಭನಕಾರರನ್ನು ಚದುರಿಸಲು ತಾಲಿಬಾನಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.