ಮೇಕೆದಾಟು (Meke datu) ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ಹೇಳಿದ್ದಾರೆ.
ದಾವಣಗೆರೆಯಲ್ಲಿ (Davangere) ಮಾತನಾಡಿದ ಸಿಎಂ ಬೊಮ್ಮಾಯಿ, “ ಸುಪ್ರೀಂ ಕೋರ್ಟ್ ನಲ್ಲಿ (Supreme court) ಈ ಬಗ್ಗೆ ಯಾವುದೇ ತಡೆಯಾಜ್ಞೆ ಇಲ್ಲ. ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಿಷಯ ಈಗಾಗಲೇ ಶಿಫಾರಸ್ಸು ಆಗಿ, 15 ಸಭೆಗಳಾಗಿವೆ. ಪ್ರಾಧಿಕಾರಕ್ಕಿರುವ ಅಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ವಾರ ಸಭೆ ಕರೆಯುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ (Tamil nadu government) ಆಕ್ಷೇಪ ವ್ಯಕ್ತಪಡಿಸುವುದು ಕಾನೂನು ಬಾಹಿರ ಮತ್ತು ಅದಕ್ಕೆ ಯಾವುದೇ ಅರ್ಥವೂ ಇಲ್ಲ ಎಂದಿದ್ದಾರೆ.ಇದೇ ವೇಳೆ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು. ಇದನ್ನೂ ಓದಿ : – ಅಮ್ಮನಿಗೆ ಹುಷಾರಿಲ್ಲ..ಆಸ್ಪತ್ರೆಯಲ್ಲಿದ್ದಾರೆ…ದಯವಿಟ್ಟು ವಿಚಾರಣೆ ಮುಂದೂಡಿ ಎಂದ ರಾಗಾ