ಚೆನೈ : ತಮಿಳುನಾಡು ವಿಧಾನಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಈ ಕುರಿತು ಅಣ್ಣಾಮಲೈ ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದೇನೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ಕಣಕ್ಕಿಳಿದಿದ್ದು, ಕಳೆದ 6ರಂದು ಮತದಾನ ಮುಕ್ತಾಯವಾಗಿದೆ. ಮೇ.2ರಂದು ಫಲಿತಾಂಶ ಪ್ರಕಟವಾಗಲಿದೆ