ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲದಲ್ಲಿದೆ. ಶಿಕ್ಷಣ ವಿಚಾರದಲ್ಲಿ ಸ್ಪಷ್ಟ ನಿಲುವು ಇಲ್ಲದ ರಾಜ್ಯ ಸರ್ಕಾರ ಶಿಕ್ಷಕರನ್ನು ಭಿಕ್ಷುಕರಂತೆ ನೋಡುತ್ತಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.
ಮಂಗಳೂರಿನ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಕೂಡ ಶಿಕ್ಷಕರನ್ನು ಕಡೆಗಣಿಸಲಾಗಿದೆ. ಅನುದಾನ ರಹಿತ ಶಿಕ್ಷಕರಿಗೆ ತಕ್ಷಣ ಅನುದಾನ ಬಿಡುಗಡೆ ಮಾಡಬೇಕು. ಶಿಕ್ಷಣ ಸಚಿವರು ಪ್ರತಿನಿತ್ಯ ಒಂದು ಒಂದು ಹೇಳಿಕೆಕೊಟ್ಟು ಪೋಷಕರಿಗೆ ಮತ್ತು ಮಕ್ಕಳಿಗೆ ಗೊಂದಲ ಸೃಷ್ಟಿಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ರಾಜ್ಯದಲ್ಲಿ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಅಕಾಡಮಿಕ್ ವಿಚಾರದಲ್ಲಿ ಗೊಂದಲದಲ್ಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಕೋವಿಡ್ ಗಿಂತ ಶಿಕ್ಷಣ ವಿಚಾರದಲ್ಲಿ ಸಾಕಷ್ಟು ಸಮಸ್ಯೆಯಲ್ಲಿದ್ದಾರೆ. ಪರೀಕ್ಷೆಯ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ಶಿಕ್ಷಣ ಸಚಿವರು ಕೊಡಬೇಕು ಎಂದು ಆಗ್ರಹಿಸಿದರು. ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಡಿ. ಲಸಿಕೆ ಲಾಜಿಕ್ ಬಗ್ಗೆ ಜನಪ್ರತಿನಿಧಿಗಳು ತಿಳಿದುಕೊಳ್ಳಬೇಕು. ಲಸಿಕೆಗಳ ವಿಚಾರದಲ್ಲಿ ನಾನು ಜನರ ದಾರಿ ತಪ್ಪಿಸಿದ ಉದಾಹರಣೆ ಇದ್ರೆ ರಾಜಕೀಯ ನಿವೃತ್ತಿ ಮಾಡುತ್ತೇನೆ ಎಂದು ಯುಟಿ ಖಾದರ್ ಸವಾಲೆಸೆದರು.