ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರ ಬಗ್ಗೆ ಮಧ್ಯರಾತ್ರಿಯ ವಿಚಾರಣೆಯಲ್ಲಿ ಮೇ 10ರ ವರೆಗೆ ಅವರನ್ನು ಬಂಧಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬಗ್ಗಾ ಬಂಧನ ವಿವಾದ: ಮೊಹಾಲಿ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ- Kannada Prabha

ಬಗ್ಗಾ ಮನವಿ ಮೇರೆಗೆ ಪ್ರಕರಣದ ಬಗೆಗಿನ ವಿಚಾರಣೆ ಮೇ 10ರಂದು ನಡೆಯಲಿದ್ದು, ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದೆಂದು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಆದೇಶ ನೀಡಿದೆ. ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಂಜಾಬ್ನ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ನನ್ನು ದೆಹಲಿಯಲ್ಲಿ ಬಂಧಿಸಿದ್ದರು. ಇದನ್ನೂಓದಿ : – ಮೇ 21ಕ್ಕೆ ನಿಗದಿಯಂತೆ ನಡೆಯಲಿದೆ ನೀಟ್ ಪಿಜಿ ಪರೀಕ್ಷೆ

ದೆಹಲಿ ಮುಖ್ಯಮಂತ್ರಿಗೆ ಜೀವ ಬೆದರಿಕೆ ಹಾಕದ್ದ ಹಿನ್ನೆಲೆಯಲ್ಲಿ ಆಪ್ ನಾಯಕ ಸನ್ನಿಸಿಂಗ್ ತಜೀಂದರ್ ಪಾಲ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವದಂತಿಗಳನ್ನು ಹರಡುತ್ತಿದ್ದಾರೆ. ಧಾರ್ಮಿಕ ಮತ್ತು ಕೋಮು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೈಬರ್ ಸೆಲ್ನಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯನ್ನು ಬಂಧಿಸಿದ್ದರು. ಮೊಹಾಲಿ ನಿವಾಸಿ ಎಎಪಿ ನಾಯಕ ಸನ್ನಿ ಅಹ್ಲುವಾಲಿಯಾ ಅವರ ದೂರನ್ನು ಆಧರಿಸಿ, ಐಪಿಸಿ ಸೆಕ್ಷನ್ 153-A, 505, 505 (2), 506 ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂಓದಿ : – ಮುಳುಗುವ ಹಡಗಿನಿಂದ ಹೊರಗೆ ಬಂದು, ಬೆಳಗುವ ಹಡಗಿನಲ್ಲಿ ಕೂತಿದ್ದೀರಿ – ಕಟೀಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!