ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿ ಮಗು ಸೇರಿ ಮೂವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಹೊರ ವಲಯದಲ್ಲಿ ನಡೆದಿದೆ. ಸೆಲ್ವಿ (35), ದೀಪಿಕಾ(06), ನೀಲಮ್ಮ(29) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಹಿರಿಯೂರಿನಿಂದ ಚಳ್ಳಕೆರೆಗೆ ಕಾಂಕ್ರೀಟ್ ಕೆಲಸಕ್ಕೆ ಕೂಲಿ ಕಾರ್ಮಿಕರು ತೆರಳುತ್ತಿದ್ದರು ಈ ಸಮಯದಲ್ಲಿ ಅಪಘಾತ ಸಂಭವಿಸಿದೆ. ಮೃತರು ಹಿರಿಯೂರಿನ ನಿವಾಸಿಗಳು. ಇನ್ನೂ ಒಂಬತ್ತು ಜನರು ಗಾಯಗೊಂಡಿದ್ದು, ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯೂರು ಸಿಪಿಐ ರಾಘವೇಂದ್ರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.