ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೋಗಿದ್ದ ರಾಜ್ಯದ 7 ಮಂದಿ ದುರ್ಮರಣ

ಲಖಿಮ್ಪುರ್- ಮೋತಿಪುರ್ ಬಳಿ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರವಾಸಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಯೋಧ್ಯೆಗೆ ಬಸ್ನಲ್ಲಿ ಕರ್ನಾಟಕದ ಬೀದರ್ನ 16 ಜನರು ಸಾಗುತ್ತಿದ್ದರು. ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಮೃತಪಟ್ಟವರೆಲ್ಲರೂ ಬೀದರ್ನ ಗುಂಪಾ ಹಾಗೂ ಸುಲ್ತಾನಪುರ್ ಗ್ರಾಮದದವರೆಂದು ಗುರುತಿಸಲಾಗಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಬ್ರಾನಚೀ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ : – ನಾನೊಬ್ಬ ಹಿರಿಯನಾಗಿದ್ದು, ಬೇರೆಯವರಿಗೆ ಮಾರ್ಗದರ್ಶನ ಮಾಡುವ ಹಂತಕ್ಕೆ ಬೆಳೆದಿದ್ದೇನೆ – ಜಿ.ಟಿ ದೇವೇಗೌಡ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!