ಅಮೆರಿಕಾದ ಟೆಕ್ಸಾಸ್ ನಗರದಲ್ಲಿದ್ದ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿರುವ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 18 ಮಕ್ಕಳೂ ಸೇರಿದಂತೆ 21 ಮಂದಿಯನ್ನು ಹತ್ಯೆ ಮಾಡಿದ್ದಾನೆ. 18ರ ಹರೆಯದ ಯುವಕ ಸಾಲ್ವಡೋರ್ ರಾಮೊಸ್ ಆರೋಪಿ ಎಂದು ಗುರ್ತಿಸಲಾಗಿದೆ.
![](https://rajnewskannada.in/wp-content/uploads/2022/05/image-8.png)
ದಾಳಿ ನಡೆಸಿದ ಈತನನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಜಪಾನ್ ಸೇರಿದಂತೆ ಏಷ್ಯಾದ ದೇಶಗಳಿಗೆ ಐದು ದಿನಗಳ ಪ್ರವಾಸಕ್ಕೆ ತೆರಳಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ‘ಇಂತಹ ಪ್ರಕರಣಗಳು ವಿಶ್ವದ ಇತರ ದೇಶಗಳಲ್ಲಿ ಅಪರೂಪಕ್ಕೊಮ್ಮೆ ಆಗುತ್ತವೆ. ಆದರೆ, ಅಮೆರಿಕದಲ್ಲಿ ಪದೇಪದೇ ಆಗುತ್ತಿರುವುದು ವಿಷಾದದ ಸಂಗತಿ. ಇದನ್ನೂ ಓದಿ :- ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?
![](https://rajnewskannada.in/wp-content/uploads/2022/05/image-9.png)
ದೇವರಾಣೆ, ನಾವು ಗನ್ ಲಾಬಿಗೆ ಕಡಿವಾಣ ಹಾಕುತ್ತೇವೆ. ಮೃತರ ಗೌರವಾರ್ಥ ದೇಶವ್ಯಾಪಿ ಬಾವುಟಗಳನ್ನು ಅರ್ಧ ಮಟ್ಟಕ್ಕೆ ಹಾರಿಸುತ್ತೇವೆ ಎಂದು ಹೇಳಿದ್ದಾರೆ. ಶ್ವೇತಭವನದಲ್ಲಿ ಶೂಟೌಟ್ನಲ್ಲಿ ಮಡಿದವರಿಗೆ ಶೋಕ ವ್ಯಕ್ತಪಡಿಸಲು ಧ್ವಜಗಳನ್ನು ಅರ್ಧ ಹಾರಿಸಿ ಗೌರವಿಸಲಾಯಿತು. ನಂತರ ಮಾತನಾಡಿದ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಘಟನೆಯನ್ನು ಖಂಡಿಸಿದ್ದಾರೆ. ಇದು ಈ ವರ್ಷದಲ್ಲೇ ಅತ್ಯಂತ ಭೀಕರ ದಾಳಿ ಇದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ :- ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣ – ವಿಚಾರಣೆ ಮೇ 26ಕ್ಕೆ ಮುಂದೂಡಿದ ಜಿಲ್ಲಾ ಕೋರ್ಟ್